ADVERTISEMENT

ಪಂಚಮಸಾಲಿಗೆ 2ಎ ಪ್ರವರ್ಗ ಮೀಸಲಾತಿ: ಸಂಧಾನ ವಿಫಲ

ಸಿ.ಎಂ ಜೊತೆ ಚರ್ಚಿಸುವೆ: ಸಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 20:41 IST
Last Updated 9 ಜನವರಿ 2021, 20:41 IST

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರವರ್ಗ ಮೀಸಲಾತಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಲ್ಲಿ ಸಚಿವ ಸಿ.ಸಿ.ಪಾಟೀಲ, ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜದ ಮುಖಂಡರೊಂದಿಗೆ ಶನಿವಾರ ನಡೆದ ಸಂಧಾನ ಸಭೆ ವಿಫಲವಾಯಿತು.

ಮೀಸಲಾತಿಗೆ ಆಗ್ರಹಿಸಿ ಜ. 14ರಂದು ಸ್ವಾಮೀಜಿ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಹಾಗೂ ಹೋರಾಟ ಕೈ ಬಿಡುವಂತೆ ಮನವೊಲಿಸಲು ಸಚಿವ ಸಿ.ಸಿ.ಪಾಟೀಲ ಮುಂದಾಗಿದ್ದರು. ಹೋರಾಟ ಕೈಬಿಟ್ಟು ಬೇಡಿಕೆ ಈಡೇರಿಕೆಗೆ ಸಮಯಾವಕಾಶ ನೀಡುವಂತೆ ಸಚಿವರು ಮನವಿ ಮಾಡಿದರು.

ಹೋರಾಟದ ಪಟ್ಟು ಸಡಿಲಿಸಲು ಸ್ವಾಮೀಜಿ ಹಾಗೂ ಸಮಾಜದ ಮುಖಂಡರು ಒಪ್ಪಲಿಲ್ಲ. ಸರ್ಕಾರದ ಸ್ಪಂದನೆಯ ಬಗ್ಗೆ ಜ.14ರವರೆಗೆ ಕಾದು ನೋಡಲು ಸಭೆ ತೀರ್ಮಾನಿಸಿತು.

ADVERTISEMENT

‘ಇಂದಿನ ಸಭೆಯ ನಿರ್ಣಯಗಳ ಬಗ್ಗೆ ಭಾನುವಾರ ಮುಖ್ಯಮಂತ್ರಿ ಜೊತೆ ಚರ್ಚಿಸಲಿದ್ದೇನೆ. ಮುಖ್ಯಮಂತ್ರಿ ಜೊತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಮಾತುಕತೆಗೆ ಆಹ್ವಾನಿಸಲಾಗುವುದು ಎಂದು ಸಿ.ಸಿ.ಪಾಟೀಲ ತಿಳಿಸಿದರು.

ಸಂಸದ ಸಂಗಣ್ಣ ಕರಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸಂಧಾನ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.