ADVERTISEMENT

ನಗರದತ್ತ ಪಂಚಮಸಾಲಿ ಸ್ವಾಮೀಜಿಗಳ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 20:15 IST
Last Updated 14 ಫೆಬ್ರುವರಿ 2021, 20:15 IST
ಡೋಲು ಕುಣಿತಕ್ಕೆ ಹೆಜ್ಜೆ ಹಾಕಿದ ವಿಜಯಾನಂದ ಕಾಶಪ್ಪನವರ ಹಾಗೂ ಮುಖಂಡರು
ಡೋಲು ಕುಣಿತಕ್ಕೆ ಹೆಜ್ಜೆ ಹಾಕಿದ ವಿಜಯಾನಂದ ಕಾಶಪ್ಪನವರ ಹಾಗೂ ಮುಖಂಡರು   

ದಾಬಸ್ ಪೇಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಕೂಡಲ ಸಂಗಮ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಮಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರವೇಶಿಸಿದೆ.

’ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಪಂಚಮಸಾಲಿ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಬಲಿಷ್ಠಗೊಳಿಸಲು ಜನಾಂಗಕ್ಕೆ 2ಎ ಮೀಸಲಾತಿ ಕಲ್ಪಿಸಿಕೊಡಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‘ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

’ಸರ್ಕಾರ ನಮ್ಮ ಬೇಡಿಕೆ ಪರಿಗಣಿಸಿ ಮುಂದಿನ ದಿನಗಳಲ್ಲಿ ಜನಾಂಗಕ್ಕೆ 2ಎ ಮೀಸಲಾತಿ ಕಲ್ಪಿಸಿಕೊಡಬೇಕು. ಇಲ್ಲದೇ ಹೋದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು. ಈಗ ಬೆಂಗಳೂರಿನ ಗಡಿಗೆ ಹತ್ತಿರದಲ್ಲಿ ಪಾದಯಾತ್ರೆ ಇದ್ದು, ನಾಡಿನ ಉದ್ದಕ್ಕೂ ಜನಾಂಗದ ಹೋರಾಟಗಾರರು ನಮ್ಮ ಜೊತೆ ಕೈಜೋಡಿಸಲಿದ್ದಾರೆ‘ ಎಂದರು.

ADVERTISEMENT

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ‍ ಅವರು ದಾಬಸ್ ಪೇಟೆ ಪಟ್ಟಣದಲ್ಲಿ ಪಾದಯಾತ್ರೆ ಮುಗಿದು ತಂಗುವ ವೇಳೆ ಡೋಲು ಕುಣಿತಕ್ಕೆ ಹೆಜ್ಜೆ ಹಾಕಿ ನೆರೆದವರನ್ನು ರಂಜಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.