ADVERTISEMENT

ನಮ್ಮ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ: ಕೂಡಲಸಂಗಮಶ್ರೀ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 16:49 IST
Last Updated 26 ಡಿಸೆಂಬರ್ 2021, 16:49 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ಜಮಖಂಡಿ (ಬಾಗಲಕೋಟೆ): ‘ಪಂಚಮಸಾಲಿ 2ಎ ಮೀಸಲಾತಿ ಹೋರಾಟದಿಂದಾಗಿ ಸಮಾಜವನ್ನು ಎಲ್ಲೆಡೆ ಗುರುತಿಸುವಂತಾಗಿದೆ. ಶೀಘ್ರದಲ್ಲಿ ಸರ್ಕಾರ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ನೀಡಲಿದೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಇಲ್ಲಿನ ರಾಣಿ ಚನ್ನಮ್ಮ ವಿವಿಧೋದ್ದೇಶ ಸಹಕಾರಿ ಸಂಘದ 18ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಸಮಾಜ ಅಸಂಘಟಿತವಾಗಬಾರದು ಎಂಬ ನಿಟ್ಟಿನಲ್ಲಿ ಇಡೀ ಸಮಾಜವನ್ನು ಒಗ್ಗೂಡಿಸಿಕೊಂಡು ಪಾದಯಾತ್ರೆ ಮಾಡಲಾಗಿದೆ. ಎರಡು ದಶಕಗಳಿಂದ ಮೀಸಲಾತಿಗಾಗಿ ಹೋರಾಟ, ಪ್ರತಿಭಟನೆ ಮಾಡುತ್ತ ಬರಲಾಗಿದೆ. ಹೋರಾಟದಿಂದ ಸಮಾಜದ ಶಕ್ತಿ ಇಮ್ಮಡಿಯಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.