ವಿಜಯೇಂದ್ರ ಹಾಗೂ ನಂದಿನಿ
– ಪ್ರಜಾವಾಣಿ ಚಿತ್ರಗಳು
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಗುರುವಾರ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ.
‘ಪ್ರತಿಭಟನೆಯನ್ನು ವ್ಯವಸ್ಥಿತವಾಗಿ ದಮನ ಮಾಡಲು ಸರ್ಕಾರ ಉದ್ದೇಶಿಸಿದ್ದು, ಇದಕ್ಕಾಗಿ ಮೊದಲಿಗೆ ಅನುಮತಿ ನೀಡಲಿಲ್ಲ. ಬಳಿಕ ಶಾಂತಿಯುತ ಹೋರಾಟಗಾರರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.
‘ಹೋರಾಟದ ಸ್ವರೂಪ ಹೇಗಿರಬೇಕೆಂಬ ಬಗ್ಗೆ ಗುರುವಾರ ಬೆಳಿಗ್ಗೆ ಎಲ್ಲ ನಾಯಕರೂ ಸೇರಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಅವರು ಹೇಳಿದರು.
ಅಧಿಕಾರಿಗಳ ಅಮಾನತ್ತಿಗೆ ಒತ್ತಾಯ: ಪಂಚಮಸಾಲಿ ಸಮುದಾಯದ ಹೋರಾಟದಲ್ಲಿ ಹಿಂಸಾಚಾರ ಆಗಿರುವುದು ಅಲ್ಲಿಯ ಅಧಿಕಾರಿಗಳು ದುರ್ನಡತೆ, ದರ್ಪವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಕೂಡಲೇ ಲಾಠಿ ಪ್ರಹಾರ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಪಂಚಮಸಾಲಿ ಸಮಾಜದ ಮುಖಂಡರನ್ನು ಮತ್ತು ಹಿರಿಯರನ್ನು ಮಾತುಕತೆಗೆ ಕರೆಸಿ ಸೌಹಾರ್ದತೆಯಿಂದ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.