ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಿಜಯಪುರದಲ್ಲಿ ಹೇಳಿದರು. ‘ಪ್ರತಿಭಟನಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದಕ್ಕೆ ಸಾಕ್ಷಿಯಾಗಿ ಫೋಟೋಗಳಿವೆ. ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.