ADVERTISEMENT

ಜಿ.ಪಂ, ತಾ.ಪಂ. ಪಂಚಾಯಿತಿ ಮೀಸಲಾತಿ: ಅರ್ಜಿ ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 23:30 IST
Last Updated 30 ಸೆಪ್ಟೆಂಬರ್ 2024, 23:30 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ರಾಜ್ಯದಲ್ಲಿ ಜಿ.ಪಂ ಹಾಗೂ ತಾ.ಪಂ.ಗಳಿಗೆ ಮೀಸಲಾತಿ ಅಂತಿಮಗೊಳಿಸುವ ಪ್ರಕ್ರಿಯೆ ವಿಳಂಬ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್‌ ಪುನಃ ನಾಲ್ಕು ವಾರ ಮುಂದೂಡಿದೆ.

ಈ ಸಂಬಂಧದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿದ್ದವು. ಆದರೆ, ಸಮಯಾಭಾವದ ಕಾರಣ ಅರ್ಜಿ ವಿಚಾರಣೆ ಹಂತಕ್ಕೆ ತಲುಪಲಿಲ್ಲ.

‘ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿ ಆಯೋಗವು 2023ರಲ್ಲಿ ಈ ಅರ್ಜಿ ಸಲ್ಲಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.