ADVERTISEMENT

ಪತ್ರಿಕಾ ವಿತರಕರಿಗೆ ನೀಡಿದ ಮೊದಲ ರಾಜ್ಯೋತ್ಸವ ಪ್ರಶಸ್ತಿಗೆ ಜವರಪ್ಪ ಭಾಜನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2023, 11:06 IST
Last Updated 31 ಅಕ್ಟೋಬರ್ 2023, 11:06 IST
<div class="paragraphs"><p>ಜವರಪ್ಪ</p></div>

ಜವರಪ್ಪ

   

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಮೈಸೂರಿನ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.

ADVERTISEMENT

ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು, ‘ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು’ ಎನ್ನುವ ಭರವಸೆ ನೀಡಿದ್ದರು.

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿರುವ ಮೈಸೂರಿನ ಜವರಪ್ಪ ಅವರನ್ನು ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್‌ನಿಂದ ಇದೇ ನವರಾತ್ರಿ ಸಂದರ್ಭದಲ್ಲಿ ಹೆಮ್ಮೆಯ ವಿತರಕ ಎಂದು ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.