ಬೆಂಗಳೂರು: ಕರ್ನಾಟಕ ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರನ್ನಾಗಿ ಬಿ.ಎಸ್. ಪರಮಶಿವಯ್ಯ ಅವರನ್ನು ನೇಮಿಸಲಾಗಿದೆ.
ಸೋಮವಾರವಷ್ಟೇ ಈ ನಿಗಮ ರಚಿಸಿ ಆದೇಶ ಹೊರಡಿಸಿ, ₹500 ಕೋಟಿ ಅನುದಾನವನ್ನು ನಿಗದಿ ಮಾಡಲಾಗಿತ್ತು. ಅಷ್ಟೇಬೇಗನೆ ಅಧ್ಯಕ್ಷರ ನೇಮಕ ಮಾಡಲಾಗಿದೆ.
ಆರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ನೇಮಕ ಮಾಡುವ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ಒಲವು ಹೊಂದಿದ್ದರು. ಆದರೆ, ಅವರು ನಿರಾಕರಿಸಿದ್ದರಿಂದ ಈ ಹುದ್ದೆ ಪರಮಶಿವಯ್ಯ ಅವರಿಗೆ ಒಲಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.