ಜಿ. ಪರಮೇಶ್ವರ
ಬೆಂಗಳೂರು: ‘ವಿವಿಧ ನಿಗಮ, ಮಂಡಳಿಗೆ ನಾಮನಿರ್ದೇಶನ ಮಾಡಬೇಕಿರುವ ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಪಟ್ಟಿ ಪೂರ್ಣವಾಗಬೇಕಿದೆ. ಕೆಪಿಸಿಸಿ ಅಧ್ಯಕ್ಷರು ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೇ ಅಧಿಕಾರ ನೀಡಲಾಗಿದೆ. ಹೈಕಮಾಂಡ್ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಿಗಮ, ಮಂಡಳಿಗೆ ನಾಮನಿರ್ದೇಶನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಶಿಫಾರಸು ಮಾಡಲು ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.