ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಶೀಟರ್‌ವೊಬ್ಬ ಜನ್ಮದಿನ ಆಚರಣೆ ಮಾಡಿಕೊಂಡಿದ್ದ ವಿಡಿಯೊವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪ್ರಕರಣ ಸಂಬಂಧ ಜೈಲಿನ ಅಧಿಕಾರಿಗಳು ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಅಧಿಕಾರಿಗಳು ನೀಡಿದ ದೂರಿನ ಅನ್ವಯ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಮತ್ತು ಈತನ ಸಹಚರರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಎನ್‌ಸಿಆರ್(ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ ಇತ್ತೀಚೆಗೆ ತನ್ನ ಸಹಚರರ ಜತೆ ಜನ್ಮದಿನವನ್ನು ಆಚರಿಸಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.