ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ: ಸಂವಿಧಾನ ಅಂಗೀಕರಿಸಿ 75 ವರ್ಷಗಳು ಪೂರ್ಣಗೊಂಡ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿ ಶನಿವಾರ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಕಾಂಗ್ರೆಸ್ ಪಕ್ಷವೇ ಎಲ್ಲ ಹಕ್ಕುಗಳನ್ನು ನೀಡಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಳ್ಳಬೇಕು' ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
'ಕಾಂಗ್ರೆಸ್ ಪಕ್ಷ ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ನೀಡಿದ್ದರಿಂದ ಮೋದಿ ಈಗ ದೇಶದ ಪ್ರಧಾನಿಯಾಗಿದ್ದಾರೆ. ಅಲ್ಲದಿದ್ದರೆ ಇದು ಸಾಧ್ಯವಿತ್ತೇ?' ಎಂದು ಕೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್ ಹಗರಣದ ಸಂಬಂಧ ಎಫ್‌ಐಆರ್ ಕುರಿತಂತೆ ಪ್ರತಿಕ್ರಿಯಿಸಿದ ಅವರು 'ಇದರ ಬಗ್ಗೆ ನನಗೆ ಅರಿವಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ' ಎಂದಷ್ಟೇ ಉತ್ತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.