ADVERTISEMENT

‘ಪರಮೇಶ್ವರ ಬಂದು ಹೇಳಿದ್ದರಿಂದ ಸ್ಪರ್ಧೆ’

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 17:48 IST
Last Updated 24 ಮಾರ್ಚ್ 2019, 17:48 IST
ಭಾನುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಎಚ್.ಡಿ.ದೇವೇಗೌಡ ಅವರು ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಸಚಿವ ಎಸ್.ಆರ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್, ಮಾಜಿ ಶಾಸಕರಾದ ಸುರೇಶ್ ಬಾಬು, ಕಾಂಗ್ರೆಸ್ ಮುಖಂಡ ಷಫಿ ಅಹಮ್ಮದ್, ಶಾಸಕರಾದ ಡಿ.ಸಿ.ಗೌರಿಶಂಕರ್, ಬಿ.ಸತ್ಯನಾರಾಯಣ, ಎಂ.ವಿ. ವೀರಭದ್ರಯ್ಯ ಇದ್ದರು

ತುಮಕೂರು: ‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಾನು ಸ್ಪರ್ಧಿಸಲು ಒತ್ತಾಯ ಇತ್ತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮನೆಗೆ ಬಂದು ತುಮಕೂರು ನಿಮ್ಮ ಪಕ್ಷಕ್ಕೆ ಬಿಟ್ಟುಕೊಟ್ಟಿರುವ ಕ್ಷೇತ್ರ. ನೀವು ಬಂದು ಸ್ಪರ್ಧೆ ಮಾಡಿದರೆ ನಾವು ಬೆಂಬಲಿಸುತ್ತೇವೆ ಎಂದರು. ಹೀಗಾಗಿ, ಸೋಮವಾರ ಮಧ್ಯಾಹ್ನ 2.15ಕ್ಕೆ ನಾಮಪತ್ರ ಸಲ್ಲಿಸುತ್ತಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ಹಾಗೂ ತುಮಕೂರು ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಹೇಳಿದರು.

ಭಾನುವಾರ ಸಂಜೆ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT