ADVERTISEMENT

ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಗೆಲುವು: ಜಗದೀಶ ಶೆಟ್ಟರ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 1 ಮೇ 2021, 6:45 IST
Last Updated 1 ಮೇ 2021, 6:45 IST
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌   

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿದ ಜನಪರ ಕಾರ್ಯಗಳು ಮತದಾರರ ಮನಸ್ಸಿನಲ್ಲಿವೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವ ಭರವಸೆಯಿದೆ. ಜನರ ಮನದ ಇಂಗಿತ ಏನೆನ್ನುವುದು ಭಾನುವಾರ (ನಾಳೆ) ಗೊತ್ತಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT