ADVERTISEMENT

ಪ.ಸ.ಕುಮಾರ್‌ಗೆ ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 16:35 IST
Last Updated 21 ನವೆಂಬರ್ 2022, 16:35 IST
ಪಿ.ಸಂಪತ್ ಕುಮಾರ್
ಪಿ.ಸಂಪತ್ ಕುಮಾರ್   

ಧಾರವಾಡ: ಚಿತ್ರಕಲಾ ಶಿಲ್ಪಿ ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಜೀವಮಾನ ಸಾಧನೆಗೆ ನೀಡುವ ‘ಕುಂಚ ಕಲಾ ತಪಸ್ವಿ’ ರಾಷ್ಟ್ರೀಯ ಪ್ರಶಸ್ತಿಯು ಹಿರಿಯ ಕಲಾವಿದ ಬೆಂಗಳೂರಿನ ಪಿ.ಸಂಪತ್ ಕುಮಾರ್ (ಪ.ಸ.ಕುಮಾರ್) ಅವರಿಗೆ ಲಭಿಸಿದೆ.

ಪ್ರಶಸ್ತಿಯು ₹1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

‘ಕುಂಚ ಕಲಾಶ್ರೀ’ ರಾಷ್ಟ್ರೀಯ ಪ್ರಶಸ್ತಿಯು ಧಾರವಾಡದ ಎಫ್‌.ವಿ.ಚಿಕ್ಕಮಠ ಅವರಿಗೆ ಲಭಿಸಿದೆ. ಈ ಪ್ರಶಸ್ತಿಯು ₹50ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ‘ಯುವ ಕುಂಚ ಕಲಾಶ್ರೀ’ ರಾಷ್ಟ್ರೀಯ ಪ್ರಶಸ್ತಿಯು ಚಿಕ್ಕಮಗಳೂರಿನ ಲಕ್ಷ್ಮೀ ಮೈಸೂರು ಹಾಗೂ ಮುಂಬೈನ ಸತೀಶ ಪಾಟೀಲ ಅವರಿಗೆ ಸಂದಿದೆ. ಈ ಪ್ರಶಸ್ತಿಯು ತಲಾ ₹25ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ADVERTISEMENT

ನ.28ರಂದು ಧಾರವಾಡದ ಸರ್ಕಾರಿ ಕಲಾ ಗ್ಯಾಲರಿಯಲ್ಲಿ ಪ್ರಶಸ್ತಿ ವಿಜೇತರಿಂದ ಚಿತ್ರಕಲಾ ಪ್ರಾತ್ಯಕ್ಷಿಕೆ ಹಾಗೂ ನ.29ರಂದು ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ
ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.