ADVERTISEMENT

ಇಂಡಿಗೊ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನ: ಪ್ರಯಾಣಿಕನ ಬಂಧನ

ಪಿಟಿಐ
Published 2 ಅಕ್ಟೋಬರ್ 2023, 13:55 IST
Last Updated 2 ಅಕ್ಟೋಬರ್ 2023, 13:55 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಾಗ್ಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನ ಟೇಕಾಫ್ ಆಗುವ ಮೊದಲೇ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಯತ್ನಿಸಿದ ಆರೋಪದ ಮೇಲೆ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಪ್ನಿಲ್‌ ಹೊಲೆ ಎಂದು ಗುರುತಿಸಲಾದ ವ್ಯಕ್ತಿಯು ಸೆಪ್ಟೆಂಬರ್ 30 ರಂದು ರಾತ್ರಿ 10 ಗಂಟೆ ಸುಮಾರಿಗೆ ನಾಗ್ಪುರದಿಂದ ಬೆಂಗಳೂರಿಗೆ ಹೋಗುವ ಇಂಡಿಗೊ ವಿಮಾನ 6E6806 ಅನ್ನು ಹತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಸ್ವಪ್ನಿಲ್‌ ವಿಮಾನದ ತುರ್ತು ನಿರ್ಗಮನದ ಬಾಗಿಲಿನ ಪಕ್ಕದ ಆಸನದಲ್ಲಿ ಕುಳಿತಿದ್ದು. ವಿಮಾನ ಟೇಕಾಫ್ ಆಗುವ ಮುನ್ನ, ಸಿಬ್ಬಂದಿಗಳು ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದ ವೇಳೆ, ತುರ್ತು ನಿರ್ಗಮನ ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.55ಕ್ಕೆ ವಿಮಾನ ಲ್ಯಾಂಡ್ ಆದ ನಂತರ, ಆರೋಪಿಯನ್ನು ಏರ್‌ಲೈನ್‌ ಸಿಬ್ಬಂದಿ ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏರ್‌ಲೈನ್‌ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕಾಯ್ದೆ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.