ಡಿ.ಕೆ.ಶಿವಕುಮಾರ್
ರಾಮನಗರ: ತಾಂಡಾ, ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಾಗಿರುವ ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಯುವ ಪರ್ವ’ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ಪಟ್ಟಾ ಖಾತೆ ವಿತರಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.