ADVERTISEMENT

ಪಾವಗಡ ಬಸ್ ಅಪಘಾತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 5:30 IST
Last Updated 26 ಮಾರ್ಚ್ 2022, 5:30 IST

ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಇದರಿಂದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಎಂಬುವರ ಪುತ್ರ ಮಹೇಂದ್ರ (18) ಮೃತರು. ಬಸ್ ಅಪಘಾತದಲ್ಲಿ ತಲೆ ಹಾಗೂ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವಿಕ್ಟೋರಿಯಾ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚವಾಗುತ್ತದೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ತಿಳಿಸಲಾಗಿತ್ತು. ತಾಲ್ಲೂಕಿನ ಸಂಘ ಸಂಸ್ಥೆಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಹಣ ಸಂಗ್ರಹಿಸಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.