ADVERTISEMENT

ತ್ರಿವಳಿ ಜಿಲ್ಲೆಗಳಿಗೆ ಕೃಷ್ಣಾ ನೀರು ಹರಿಸಲು ಸಹಕಾರ: ಪವನ್‌ ಕಲ್ಯಾಣ್‌

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 13:48 IST
Last Updated 6 ಅಕ್ಟೋಬರ್ 2025, 13:48 IST
<div class="paragraphs"><p>ಪವನ್ ಕಲ್ಯಾಣ್</p></div>

ಪವನ್ ಕಲ್ಯಾಣ್

   

ಚಿಂತಾಮಣಿ (ಚಿಕ್ಕಬಳ್ಳಾಪುರ): ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹರಿಯುವ ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸಲು ಸಹೋದರ ಭಾವನೆಯಿಂದ ಪ್ರಯತ್ನ ಮಾಡುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಭರವಸೆ ನೀಡಿದರು.

ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು ರಾಷ್ಟ್ರಕವಿ ಕುವೆಂಪು ಮತ್ತು ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿದರು.

ADVERTISEMENT

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಚರ್ಚಿಸಿ, ಮೂರು ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ಹರಿಸಲು ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿ ಮತ್ತು ನ್ಯಾ. ವಿ. ಗೋಪಾಲಗೌಡ ಮನವಿ ಮಾಡಿದರು. ಆಗ ಈ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಪವನ್ ಕಲ್ಯಾಣ್ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.