ADVERTISEMENT

'ಪೇಸಿಎಂ' ಪೋಸ್ಟರ್ ಅಂಟಿಸಿದ ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 14:16 IST
Last Updated 23 ಸೆಪ್ಟೆಂಬರ್ 2022, 14:16 IST
ಪೇಸಿಎಂ ಪೋಸ್ಟರ್ ಅಂಟಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ
ಪೇಸಿಎಂ ಪೋಸ್ಟರ್ ಅಂಟಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ   

ಬೆಂಗಳೂರು: ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಇಂದು (ಗುರುವಾರ) ರೇಸ್ ಕೋರ್ಸ್ ರಸ್ತೆಯಲ್ಲಿ 'ಪೇಸಿಎಂ' ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ರಾಜ್ಯ ಸರ್ಕಾರದ ವಿರುದ್ಧ ಡಿಜಿಟಲ್‌ ಹೋರಾಟದಲ್ಲಿ ತೊಡಗಿದ್ದ ಕಾಂಗ್ರೆಸ್‌ ಸದಸ್ಯರ ಬಂಧನ ಖಂಡಿಸಿ ರೇಸ್‌ಕೋರ್ಸ್ ರಸ್ತೆಯಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ಕುರಿತು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ADVERTISEMENT

40 ಪರ್ಸೆಂಟ್ ಕಮಿಷನ್ ಬೊಮ್ಮಾಯಿ ಸರ್ಕಾರವು ಎಷ್ಟು ವಿಚಲಿತವಾಗಿಯೆಂದರೆ ಕರ್ನಾಟಕ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಬದಲು ಪೋಸ್ಟರ್ ಹರಿದು ವಿರೋಧ ಪಕ್ಷದ ನಾಯಕರನ್ನು ಬಂಧಿಸುವ ಕೆಲಸ ನೀಡಿದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವನ್ನು ಹೊರಹಾಕಲು ಜನತೆ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.