ADVERTISEMENT

ಪಿಡಿಒಗೆ ಜನನ, ಮರಣ ಪ್ರಮಾಣಪತ್ರ ವಿತರಣಾಧಿಕಾರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 18:20 IST
Last Updated 27 ಜೂನ್ 2020, 18:20 IST

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಇನ್ನು ಮುಂದೆ ಜನನ, ಮರಣ ಪ್ರಮಾಣಪತ್ರಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿತರಿಸಲಿದ್ದಾರೆ.ಸಾರ್ವಜನಿಕರಿಗೆ ಜನನ, ಮರಣ ಪ್ರಮಾಣಪತ್ರಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಲಭವಾಗಿ ಸಿಗುವಂತಾಗಲು ಪಿಡಿಒಗಳನ್ನು ವಿತರಣಾ ಅಧಿಕಾರಿಗಳಾಗಿ ನೇಮಿಸಲು ಈಗಾಗಲೇ ಅನುಮತಿ ನೀಡಲಾಗಿದೆ.

ಪಿಡಿಒಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿ ಬರಲಿದ್ದು, ಈ ಬಗ್ಗೆ ಆದೇಶ ಹೊರಡಿಸುವಂತೆ ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ಅವರಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT