ADVERTISEMENT

ಪಿಡಿಒ: 5 ವರ್ಷವಾಗಿದ್ದರೆ ಕಡ್ಡಾಯ ವರ್ಗ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:53 IST
Last Updated 3 ಜುಲೈ 2025, 15:53 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಹಾಯಕ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿದೆ.

ADVERTISEMENT

ಇದಕ್ಕಾಗಿ ಈ ಹುದ್ದೆಗಳ ವರ್ಗಾವಣೆ ನಿಯಂತ್ರಣ ನಿಯಮಗಳ ತಿದ್ದುಪಡಿ ಮಸೂದೆಗೆ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

2025–26ನೇ ಸಾಲಿನ ವರ್ಗಾವಣೆಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಕೌನ್ಸೆಲಿಂಗ್‌ ಮಾಡಲಾಗುತ್ತಿದೆ. ಹೀಗಾಗಿ 2024ರ ನಿಯಮಗಳು ಜಾರಿಗೆ ಬಂದ ನಂತರ, ಒಂದು ಸ್ಥಳದಲ್ಲಿ 5 ವರ್ಷ ಮೇಲ್ಪಟ್ಟು ಕಾರ್ಯನಿರ್ವಹಿಸಿರುವ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ(ಗ್ರೇಡ್‌–1 ಮತ್ತು ಗ್ರೇಡ್‌–2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ಕ್ಕೆ ಒಪ್ಪಿಗೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.