ADVERTISEMENT

ಮಕ್ಕಳ ಸಮೀಕ್ಷೆ: ಗಡುವು ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 21:47 IST
Last Updated 5 ಜೂನ್ 2021, 21:47 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಲು ಮನೆ–ಮನೆಗೆ ತೆರಳಿ ಸಮೀಕ್ಷೆ ನಡೆಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಒ) ನೀಡಲಾಗಿದ್ದ ಗಡುವನ್ನು ಹೈಕೋರ್ಟ್ ಜುಲೈ 15ರವರೆಗೆ ವಿಸ್ತರಿಸಿದೆ.

‘ಏಪ್ರಿಲ್‌ 15ರ ಗಡುವಿನೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸದ ಕಾರಣಕ್ಕೆ ಪಿಡಿಒಗಳಿಗೆ ಸರ್ಕಾರ ಶೋಕಾಸ್ ನೋಟಿಸ್ ಹೊರಸಿತ್ತು. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಸ್ತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಗಡುವನ್ನು ಮೂರು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದೊಂದೇ ದಾರಿ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ತಿಳಿಸಿತು.

ಗಡುವು ವಿಸ್ತರಿಸಬೇಕು ಎಂದು ಕೋರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಅರ್ಜಿ ಸಲ್ಲಿಸಿತ್ತು. ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದ್ದ ಹೈಕೋರ್ಟ್, ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದನ್ನು ಆಧರಿಸಿ ಗಡುವು ನಿಗದಿ ಮಾಡಿ ಸರ್ಕಾರ ಪಿಡಿಒಗಳಿಗೆ ಶೋಕಾಸ್ ನೋಟಿಸ್ ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.