ADVERTISEMENT

ಮೆಣಸಿನಕಾಯಿಗೆ ಪಿಡಿಪಿ ಯೋಜನೆ ವಿಸ್ತರಣೆ: ಚೌಹಾಣ್ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2025, 16:20 IST
Last Updated 11 ಮಾರ್ಚ್ 2025, 16:20 IST
ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪ್ರಲ್ಹಾದ ಜೋಶಿ ಮನವಿ ಸಲ್ಲಿಸಿದರು 
ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪ್ರಲ್ಹಾದ ಜೋಶಿ ಮನವಿ ಸಲ್ಲಿಸಿದರು    

ನವದೆಹಲಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ (ಎಂಐಎಸ್‌) ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಒಣಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರದಿಂದ ಔಪಚಾರಿಕವಾಗಿ ಪ್ರಸ್ತಾವನೆ ಬಂದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಭರವಸೆ ನೀಡಿದರು. 

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ಕೃಷಿ ಸಚಿವರನ್ನು ಮಂಗಳವಾರ ಭೇಟಿ ಮಾಡಿ ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಮನವಿ ಮಾಡಿದರು. ‘ರೈತರು ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಬೇಕು ಮತ್ತು ಅವರು ಸಮೃದ್ಧರಾಗಬೇಕು. ಅವರನ್ನು ಸದೃಢಗೊಳಿಸಲು ಕೇಂದ್ರ ಸರ್ಕಾರ ಬದ್ಧ’ ಎಂದು ಚೌಹಾಣ್‌ ತಿಳಿಸಿದರು. 

‘ರಾಜ್ಯದ ಸಾವಿರಾರು ಸಣ್ಣ ಹಾಗೂ ಮಧ್ಯಮ ಕೃಷಿಕರು ಮೆಣಸಿನಕಾಯಿ ಬೆಳೆಯುತ್ತಿದ್ದಾರೆ. ಬೆಲೆ ಕುಸಿತದಿಂದಾಗಿ ರಾಜ್ಯದ ಮೆಣಸಿನಕಾಯಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ಸ್ಥಿತಿಗೆ ತಲುಪಿದ್ದಾರೆ. ಈ ರೈತರಿಗೆ ಬೆಲೆ ಕೊರತೆ ಪಾವತಿ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಜೋಶಿ ಮನವಿ ಮಾಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.