ADVERTISEMENT

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 8:34 IST
Last Updated 25 ಡಿಸೆಂಬರ್ 2024, 8:34 IST
   

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುನಿರತ್ನ ಅವರು ತೆರಳುತ್ತಿದ್ದರು. ನಂದಿನಿ ಲೇಔಟ್ ಬಳಿ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ‌. ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT