ADVERTISEMENT

Pen Drive Case: ಕಾರ್ತಿಕ್, ಪುಟ್ಟರಾಜ್​​, ನವೀನ್, ಚೇತನ್ ಜಾಮೀನು ಅರ್ಜಿ ವಜಾ

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಾಸನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ.

​ಪ್ರಜಾವಾಣಿ ವಾರ್ತೆ
Published 8 ಮೇ 2024, 14:22 IST
Last Updated 8 ಮೇ 2024, 14:22 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ಹಾಸನ: ಪೆನ್​ಡ್ರೈವ್​ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕರಾದ ಕಾರ್ತಿಕ್, ಪುಟ್ಟರಾಜ್​​, ನವೀನ್ ಹಾಗೂ​​ ಚೇತನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಾಸನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ.

ಅಶ್ಲೀಲ ವಿಡಿಯೊ ಪೆನ್​ಡ್ರೈವ್ ಬಿಡುಗಡೆ ಆರೋಪದಡಿ ಈ ನಾಲ್ವರ ವಿರುದ್ಧ ಜೆಡಿಎಸ್‌ ಚುನಾವಣೆ ಏಜೆಂಟ್‌ ‍ಪೂರ್ಣಚಂದ್ರ ತೇಜಸ್ವಿ ಎಂಬುವವರು ಸೈಬರ್ ಕ್ರೈಂ​​ ಠಾಣೆಯಲ್ಲಿ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು.

ADVERTISEMENT

‌ಬಳಿಕ ಆರೋಪಿಗಳು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಡಿಯೊ ಸಿಕ್ಕ ಬಳಿಕ, ‘ಪ್ರಜ್ವಲ್ ಅಶ್ಲೀಲ ವಿಡಿಯೊ ಬಿಡುಗಡೆಗೆ ಕ್ಷಣಗಣನೆ’ ಎಂದು ನವೀನ್ ಪೋಸ್ಟ್ ಹಾಕಿದ್ದ. ಅದು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಅದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್‌ನ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್‌ಬುಕ್ ಅಕೌಂಟ್ ಡಿಲೀಟ್ ಮಾಡಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.