ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಪಡೆಯುತ್ತಿರುವ ಎಲ್ಲ ನೌಕರರಿಗೂ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಎಸ್.ಎನ್. ಬೋಸರಾಜು ಹೇಳಿದರು.
ಕಾಂಗ್ರೆಸ್‌ನ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 2.86 ಲಕ್ಷ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟಿದ್ದಾರೆ. ಅವರನ್ನು ಮತ್ತೆ ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಕುರಿತು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ, ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ನೀಡಿದ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.