ADVERTISEMENT

ಸಾಗರಮಾಲಾಕ್ಕೆ ವಿರೋಧ: ಸಂಸದ, ಶಾಸಕಿ ಫೋಟೊಗಳಿಗೆ ಸೆಗಣಿ ಎರಚಿ, ಚಪ್ಪಲಿಯೇಟು

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 6:37 IST
Last Updated 14 ಜನವರಿ 2020, 6:37 IST
ಪ್ರತಿಭಟನಾಕಾರರು ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕಿ ರೂಪಾಲಿ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಸಿಟ್ಟು ಹೊರಹಾಕಿದರು.
ಪ್ರತಿಭಟನಾಕಾರರು ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕಿ ರೂಪಾಲಿ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಸಿಟ್ಟು ಹೊರಹಾಕಿದರು.   
""
""

ಕಾರವಾರ: ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಪ್ರತಿಭಟನೆ ಮುಂದುವರಿಸಿದ್ದಾರೆ.

ಮಂಗಳವಾರ ನಗರದ ಮೀನು ಮಾರುಕಟ್ಟೆ ಬಂದ್ ಮಾಡಿದ್ದಾರೆ. ಉದ್ರಿಕ್ತ ಮೀನುಗಾರರು ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಮತ್ತು ಸಂಸದ ಅನಂತಕುಮಾರ ಹೆಗಡೆ ಭಾವಚಿತ್ರಕ್ಕೆ ಸಗಣಿ ‌ಮೆತ್ತಿ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಗರಮಾಲಾ ವಿರೋಧಿಸಿಮೀನುಗಾರ ಮುಖಂಡರು ಇದೇ 16ರಂದು ಕಾರವಾರ ಬಂದ್‌ಗೆ ಕರೆ ನೀಡಿದರು. ಇದೇ ವೇಳೆಪ್ರತಿಭಟನಾಕಾರರು ಇಡ್ಲಿ ಸಾಂಬಾರ್ ಅಚ್ಛಾ ಹೆ, ಬಿಜೆಪಿ ಸರ್ಕಾರ ಲುಚ್ಛಾ ಹೆ ಘೋಷಣೆ ಕೂಗಿದರು.

ಪ್ರತಿಭಟನಾಕಾರರು ಸಂಸದ ಅನಂತಕುಮಾರ ಹೆಗಡೆ ಸೀರೆ ಉಟ್ಟಂತೆ ಹಾಗೂ ಶಾಸಕಿ ರೂಪಾಲಿ ನಾಯ್ಕ ಪುರುಷರಂತೆ ಫೋಟೊ ಎಡಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.