ADVERTISEMENT

ಮತ ಎಣಿಕೆ ಮುಂದೂಡಿಕೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 17:45 IST
Last Updated 5 ನವೆಂಬರ್ 2020, 17:45 IST

ಬೆಂಗಳೂರು: ಚುನಾವಣೆಯಲ್ಲಿ ಮೇಲುಸ್ತುವಾರಿ ನಡೆಸುವ, ನಿರ್ದೇಶನ ನೀಡುವ ಮತ್ತು ನಿಯಂತ್ರಣ ಮಾಡುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದೆ ಎಂದಿರುವ ಹೈಕೋರ್ಟ್‌, ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಮುಂದೂಡಿರುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ.

ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನವೆಂಬರ್‌ 2ರಂದು ನಿಗದಿಯಾಗಿದ್ದ ಮತ ಎಣಿಕೆಯನ್ನು ಕೇಂದ್ರ ಚುನಾವಣಾ ಆಯೋಗ ನ.10ಕ್ಕೆ ಮುಂದೂಡಿತ್ತು. ಇದನ್ನು ಪ್ರಶ್ನಿಸಿ ನ್ಯೂಸ್‌ ಇಂಡಿಯಾ ವೋಟರ್ಸ್‌ ಫೋರಂ ಅರ್ಜಿ ಸಲ್ಲಿಸಿತ್ತು.

ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ, ‘ಚುನಾವಣೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಮತ ಎಣಿಕೆಯನ್ನು ಎಂಟು ದಿನಗಳ ಕಾಲ ಮುಂದೂಡಿರುವುದರಲ್ಲಿ ಯಾವುದೇ ಪೂರ್ವಗ್ರಹ ಕಾಣಸುತ್ತಿಲ್ಲ’ ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.