ADVERTISEMENT

ಪಿಜಿ ಆಯುಷ್: ನೋಂದಣಿಗೆ ಡಿ.13 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 15:51 IST
Last Updated 11 ಡಿಸೆಂಬರ್ 2024, 15:51 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ಸ್ನಾತಕೋತ್ತರ ಆಯುಷ್‌ ಕೋರ್ಸ್‌ನ ‘ಸ್ಟ್ರೇ ವೇಕೆನ್ಸಿ’ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರು ಡಿ. 13ರೊಳಗೆ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

ನೋಂದಣಿ‌ ಮಾಡಿ, ಶುಲ್ಕ ಪಾವತಿಸುವ ಅಭ್ಯರ್ಥಿಗಳು ಡಿ.14ರಂದು ಮೂಲ ದಾಖಲೆಗಳ ಸಮೇತ ಕೆಇಎ ಕಚೇರಿಗೆ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು. ಡಿ. 16ರವರೆಗೆ ಆಪ್ಷನ್‌ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ADVERTISEMENT

ಡಿ. 16ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ. 17ರಂದು ಅಂತಿಮ ಫಲಿತಾಂಶ ಪ್ರಕಟಿಸಲಿದ್ದು, 19ರೊಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ವಿವರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.