ADVERTISEMENT

ಪಿಜಿ ವೈದ್ಯಕೀಯ: ಡಿ.22ಕ್ಕೆ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 0:30 IST
Last Updated 21 ಡಿಸೆಂಬರ್ 2025, 0:30 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಇದೇ 22ಕ್ಕೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಕೆಲ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ, ಎಂಸಿಸಿ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಅಂತಹವರು ಅಲ್ಲಿಯೇ ಪ್ರವೇಶ ಪಡೆಯುವುದಿದ್ದರೆ, ಅವರಿಗೆ ಅನುಕೂಲ ಆಗಲಿ ಎಂದು ಡಿ.22ರಂದೇ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.

ADVERTISEMENT

ಎಂಸಿಸಿ ಸೀಟಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಡಿ.23ರಂದು ಸಂಜೆ 4 ಗಂಟೆಯೊಳಗೆ ಪ್ರಾಧಿಕಾರದ ಕಚೇರಿಗೆ ಬಂದು ಪಡೆಯಬಹುದು. ಈ ಸುತ್ತಿನಲ್ಲಿ ಭಾಗವಹಿಸಲು ಕಟ್ಟಿರುವ ಶುಲ್ಕದಲ್ಲಿ ₹25 ಸಾವಿರ ಕಡಿತ ಮಾಡಿಕೊಂಡು, ಉಳಿದ ಹಣವನ್ನು ಒಂದೇ ದಿನದಲ್ಲಿ ಹಿಂದಿರುಗಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಎಂಸಿಸಿ ಸೀಟಿಗೆ ಪ್ರವೇಶ ಪಡೆಯುವ ಕಾರಣದಿಂದ ಪ್ರಾಧಿಕಾರದಲ್ಲಿ ಎರಡನೇ ಸುತ್ತಿನಲ್ಲಿ ತಾತ್ಕಾಲಿಕವಾಗಿ ಹಂಚಿಕೆಯಾಗಿ ರದ್ದುಗೊಳ್ಳುವ ಪಿಜಿ ಸೀಟುಗಳನ್ನು ಅದೇ ಸುತ್ತಿನಲ್ಲೇ ಅರ್ಹರಿಗೆ ಸಿಗುವ ಹಾಗೆ ಮಾಡಿ, ಡಿ.24ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಈ ಮೊದಲು ದಾಖಲಿಸಿದ್ದ ಆಯ್ಕೆಗಳ ಆಧಾರದ ಮೇಲೆಯೇ ಅಂತಿಮವಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಹಾಗೆಯೇ ಈ ಸುತ್ತಿನಲ್ಲಿ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಈ ಸಂಬಂಧ ಮಾರ್ಗಸೂಚಿಗಳನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.