ADVERTISEMENT

ಪಿಜಿಸಿಇಟಿ: ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 16:31 IST
Last Updated 28 ಏಪ್ರಿಲ್ 2025, 16:31 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂಇ) ಪ್ರವೇಶದ ಪಿಜಿಸಿಇಟಿ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಿದೆ.

‘ಈ ಎರಡೂ ಪರೀಕ್ಷೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ. ಶುಲ್ಕ ಪಾವತಿಗೆ ಮೇ 12‌ ಕೊನೆ ದಿನ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ADVERTISEMENT

‘ಮೇ ಕೊನೆ ಅಥವಾ ಜೂನ್ ಮೊದಲ ವಾರದಲ್ಲಿ ಪಿಜಿಸಿಇಟಿ ನಡೆಸಲಾಗುತ್ತದೆ. ಮೇ 31ರಂದು ಡಿಸಿಇಟಿ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಅವರು ವಿವರಿಸಿದ್ದಾರೆ.

‘ಪಿಜಿ-ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕೆಇಎ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ಇಲ್ಲಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದರೆ, ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕು’ ಎಂದು ಪ್ರಸನ್ನ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.