ADVERTISEMENT

ಶಾಲೆ ಆರಂಭದ ವಿಚಾರದಲ್ಲಿ ಪ್ರಬುದ್ಧತೆಯಿಂದ ಹೆಜ್ಜೆ ಇಡಿ: ಸರ್ಕಾರಕ್ಕೆ ಫಾನಾ ಸಲಹೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 19:31 IST
Last Updated 30 ಆಗಸ್ಟ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಶಾಲೆ ಆರಂಭದ ವಿಚಾರದಲ್ಲಿ ಪ್ರಬುದ್ಧತೆಯಿಂದ ಹೆಜ್ಜೆ ಇಡಿ’ ಎಂದುಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳ ಅಸೋಸಿಯೇಷನ್ (ಫಾನಾ) ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

‘ಆನ್‌ಲೈನ್‌ ತರಗತಿಗಳಿಂದ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಿಲ್ಲ. ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಕ್ಷಕರು ವಾಟ್ಸ್‌ಆ್ಯಪ್‌ ಮೂಲಕ ಮಕ್ಕಳಿಗೆ ಕಳಿಸುವ ಸಂದೇಶಗಳಿಂದಲೂ ಪ್ರಯೋಜನವಾಗುತ್ತಿಲ್ಲ. ಈ ದೃಷ್ಟಿಯಿಂದ ಶಾಲೆ ಆರಂಭಿಸುವುದೇನೋ ಸರಿ. ಹಾಗಂತ ತರಾತುರಿಯ ತೀರ್ಮಾನ ಸೂಕ್ತವಲ್ಲ’ ಎಂದು ಫಾನಾ ತಜ್ಞರ ತಂಡದ ವರದಿಯಲ್ಲಿ ತಿಳಿಸಲಾಗಿದೆ.

‘ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎನ್ನಲಾಗಿದೆ. ಹೀಗಾಗಿ ಆತುರದ ನಿರ್ಧಾರ ಬೇಡ. ಪೋಷಕರು ಹಾಗೂ ಶಿಕ್ಷಕರ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನೂ ಆಲಿಸುವುದು ಸೂಕ್ತ’ ಎಂದು ಸಲಹೆ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.