ADVERTISEMENT

ದೂರವಾಣಿ ಕರೆ: ವಿವಾದಕ್ಕೆ ತೆರೆ ಎಳೆದ ದೇವೇಗೌಡ, ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 11:20 IST
Last Updated 6 ನವೆಂಬರ್ 2019, 11:20 IST
ದೇವೇಗೌಡ ಮತ್ತು ಯಡಿಯೂರಪ್ಪ
ದೇವೇಗೌಡ ಮತ್ತು ಯಡಿಯೂರಪ್ಪ   

ಬೆಂಗಳೂರು: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಸರ್ಕಾರದ ರಕ್ಷಣೆಗೆ ನಿಲ್ಲುವುದಾಗಿ ಹೇಳಿದ್ದಾರೆ’ ಎಂಬ ವಿವಾದಕ್ಕೆ ತೆರೆ ಎಳೆಯಲು ಇಬ್ಬರೂ ನಾಯಕರು ಮುಂದಾಗಿದ್ದಾರೆ.

‘ದೇವೇಗೌಡ ಅವರು ನನಗೆ ದೂರವಾಣಿ ಕರೆಮಾಡಿ ಮಾತನಾಡಿಲ್ಲ. ಈ ಆರೋಪದಲ್ಲಿ ಸತ್ಯಾಂಶವಿಲ್ಲ. ಮಾಜಿ ಪ್ರಧಾನಿಗೆ ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಶಕ್ತಿ ಇದೆ’ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿರುವ ಗೌಡರು, ‘ಯಡಿಯೂರಪ್ಪ, ನನ್ನ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಅವರ ಜತೆ ಮಾತನಾಡಬಾರದು ಎಂದೇನೂ ಇಲ್ಲ. ಆದರೆ ಅಂತಹ ಸಂದರ್ಭ ಬಂದಿಲ್ಲ’ ಎಂದಿದ್ದಾರೆ.

ADVERTISEMENT

‘ಯಡಿಯೂರಪ್ಪ ನಮಗೆ ಶತ್ರುವಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ, ಸಿದ್ದರಾಮಯ್ಯ ನಮಗೇನು ಆಜನ್ಮ ಶತ್ರುಗಳಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಮಾತನಾಡಿರುತ್ತೇವೆ. ಕಾಲ ಕಾಲಕ್ಕೆ ಏನು ಆಗಬೇಕು ಅದು ಆಗುತ್ತದೆ’ ಎಂದು ಮಾರ್ಮಿಕವಾಗಿ ನುಡಿದರು.

ಎಸ್‌.ಐ ವರ್ಗಾವಣೆ:ಜೆಡಿಎಸ್ ಕಾರ್ಯಕರ್ತರಿಗೆ ಹಿಂಸೆ ನೀಡಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳದಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಮನೆ ಬಳಿ ಧರಣಿ ನಡೆಸುವುದಾಗಿ ಗೌಡರು ನೀಡಿದ್ದ ಎಚ್ಚರಿಕೆಗೆ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಯಾದಗಿರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ವರ್ಗಾವಣೆ ಮಾಡಿದ್ದು, ಕಡ್ಡಾಯ ರಜೆಮೇಲೆ ಕಳುಹಿಸುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.