ADVERTISEMENT

ರಸಗೊಬ್ಬರ | ದರಪಟ್ಟಿ ಪ್ರದರ್ಶನ ಕಡ್ಡಾಯ; ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ

‘ಪ್ರಜಾವಾಣಿ’ ಫೋನ್‌ ಇನ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 20:24 IST
Last Updated 29 ಏಪ್ರಿಲ್ 2020, 20:24 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಬೆಂಗಳೂರು: ‘ಬೀಜ, ಗೊಬ್ಬರದ ವಿಚಾರದಲ್ಲಿ ರೈತರಿಗೆ ಮೋಸ ಮಾಡಿದರೆ ಸರ್ಕಾರ ಸುಮ್ಮನಿರುವುದಿಲ್ಲ. ಅಂಗಡಿಗಳಲ್ಲಿ ಗೊಬ್ಬರದ ಬೆಲೆ ಪ್ರದರ್ಶಿಸುವ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

‘ಪ್ರಜಾವಾಣಿ’ ಕಚೇರಿಯಲ್ಲಿ ಬುಧವಾರ ಫೋನ್‌ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಿಗದಿತ ದರಕ್ಕಿಂತ ಅಧಿಕ ದರದಲ್ಲಿ ಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಆಲಿಕಲ್ಲು ಮಳೆ, ಬಿರುಗಾಳಿಯಂತಹ ನೈಸರ್ಗಿಕ ವಿಕೋಪ ಸಂಭವಿಸಿ ಬೆಳೆ ಹಾನಿಯಾದರೆ ತಕ್ಷಣ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲಾಗುವುದು. ಈಚೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಂಭವಿಸಿದ ಹಾನಿಗೆ ಸರ್ಕಾರ ಈಗಾಗಲೇ ₹ 45 ಕೋಟಿ ಬಿಡುಗಡೆ ಮಾಡಿದೆ’ ಎಂದರು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.