ADVERTISEMENT

ವಕ್ಫ್ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 3:42 IST
Last Updated 9 ಮಾರ್ಚ್ 2021, 3:42 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವಕ್ಪ್ ಕಾಯ್ದೆ –1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ಶಿಕ್ಷಣ ತಜ್ಞ ಕೆ.ಎಸ್. ಸುಬ್ರಮಣ್ಯ ಅರ್ಜಿ ಸಲ್ಲಿಸಿದ್ದು, ‘ಒಂದು ನಿರ್ದಿಷ್ಟ ಧರ್ಮವನ್ನು ಪ್ರೋತ್ಸಾಹಿಸುವ ಕಾಯ್ದೆಯು ಸಂವಿಧಾನದ ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ’ ಎಂದು ವಾದಿಸಿದ್ದಾರೆ.

ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ವಕ್ಫ್‌ ಮಂಡಳಿಗೆ ನಿರ್ದೇಶನ ನೀಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯ ನಿರ್ವಹಣೆಯ ಅಂಶವನ್ನು ಮುಕ್ತವಾಗಿರಿಸಿದೆ.

ADVERTISEMENT

‘ಜಾತ್ಯತೀತತೆಯು ಮೂಲಭೂತ ಕಾನೂನು ಮತ್ತು ಸಂವಿಧಾನದ ಮೂಲ ರಚನೆಯ ಅವಿಭಾಜ್ಯ ಭಾಗ ಎಂದು ಸುಪ್ರೀಂ ಕೋರ್ಟ್‌ 2004ರಲ್ಲಿ ತಿಳಿಸಿದೆ’ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.