ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವಾಗ, ‘ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ’ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಕೃಷ್ಣ ಜಲಭಾಗ್ಯ ನಿಗಮ ಕರೆದಿದ್ದ ಅಲ್ಪಾವಧಿ ಟೆಂಡರ್ ಪ್ರಶ್ನಿಸಿ ರಾಯಚೂರಿನ ಮುದಗಲ್ ನಿವಾಸಿ ಡಿ.ಬಸವರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
’ಇದರಲ್ಲಿ ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ ಪಾಲನೆ ಆಗಿಲ್ಲ’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ‘ಹೈಕೋರ್ಟ್‌ಗೆ ಸಲ್ಲಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು. ಇಲ್ಲವಾದರೆ, ಅಂತಹ ಅರ್ಜಿಗಳನ್ನು ನ್ಯಾಯಾಲಯದ ಮುಂದೆ ವಿಚಾರಣೆಗೆ ನಿಗದಿಪಡಿಸಬಾರದು’ ಎಂದು ನಿರ್ದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.