ADVERTISEMENT

ಕೇರಳ ಗಡಿ ಮುಕ್ತಗೊಳಿಸಲು ಕೋರಿ ಪಿಐಎಲ್: ಆದೇಶ ಕಾಯ್ದಿರಿಸಿದ ಕೇರಳ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 15:48 IST
Last Updated 1 ಏಪ್ರಿಲ್ 2020, 15:48 IST
ಕೇರಳದ ಹೈಕೋರ್ಟ್
ಕೇರಳದ ಹೈಕೋರ್ಟ್   

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಕಾಸರಗೋಡು ವ್ಯಾಪ್ತಿಯಲ್ಲಿ ಕೇರಳಕ್ಕೆ ಸಂಪರ್ಕಿಸುವ ಗಡಿ ರಸ್ತೆ ಮುಚ್ಚಿರುವುದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇಲಿನ ಆದೇಶವನ್ನು ಕಾಯ್ದಿರಿಸಲಾಗಿದೆ.

ಈ ಕುರಿತಂತೆ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿರುವ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಬುಧವಾರ ಸಂಜೆಯಿಂದ ರಾತ್ರಿಯವರೆಗೂ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, "ರಸ್ತೆ ತಡೆ ತೆರವು ಮಾಡಿದರೆ ಸಾಕಷ್ಟು ತೊಂದರೆ ಎದುರಾಗಲಿದೆ" ಎಂದು ಪುನರುಚ್ಚರಿಸಿದರು.

ADVERTISEMENT

ಇದೇ ವೇಳೆ ಪ್ರಕರಣದಲ್ಲಿ ಮಧ್ಯಂತರ ಸೇರ್ಪಡೆ ಅರ್ಜಿ ದಾಖಲಿಸಿರುವ ಬೆಂಗಳೂರು ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, "ಇದೊಂದು ಗಂಭೀರ ವಿಷಯ. ಅಂತೆಯೇ ಅಂತರರಾಜ್ಯಗಳ ಮಧ್ಯೆ ಇರುವ ವಿವಾದ. ಹಾಗಾಗಿ ಈ ಅರ್ಜಿ ವಿಚಾರಣೆ ಕೇರಳ ಹೈಕೋರ್ಟ್ ವ್ಯಾಪ್ತಿಗೆ ಒಳಪಡುವುದಿಲ್ಲ" ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಕರ್ನಾಟಕದ ಆಕ್ಷೇಪಣೆ ಸಂವಿಧಾನದ 21ನೇ ವಿಧಿಗೆ ವಿರುದ್ಧವಾಗಿದೆ" ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ಆದೇಶ ಕಾಯ್ದಿರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.