ADVERTISEMENT

ಮೇಕೆದಾಟು ಪಾದಯಾತ್ರೆ ನಿರ್ಬಂಧಿಸಲು ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 15:29 IST
Last Updated 11 ಜನವರಿ 2022, 15:29 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಡೆಸುತ್ತಿರುವ ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಬೆಂಗಳೂರಿನ ತಿಂಡ್ಲು ನಿವಾಸಿ ಎ.ವಿ. ನಾಗೇಂದ್ರ ಪ್ರಸಾದ್ ಸಲ್ಲಿಸಿರುವ ಈ ಅರ್ಜಿ ವಿಚಾರಣೆಗೆ ಬರಬೇಕಿದ್ದು, ಅರ್ಜಿಯಲ್ಲಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಮನಗರ ಜಿಲ್ಲಾಧಿಕಾರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

‘ಸಾರ್ವಜನಿಕ ಚಟುವಟಿಕೆ ನಿರ್ಬಂಧಿಸಲು ಇದೇ 19ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿಗೆ ತರಲಾಗಿದೆ. ಎಲ್ಲ ರೀತಿಯ ಮೆರವಣಿಗೆ, ಧರಣಿ, ಪ್ರತಿಭಟನೆಗಳನ್ನೂ ನಿರ್ಬಂಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿ ಕೆಪಿಸಿಸಿ ಪಾದಯಾತ್ರೆ ನಡೆಸುತ್ತಿದೆ. ಸರ್ಕಾರ ಮಾತ್ರ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.