ADVERTISEMENT

ಕೋವಿಡ್‌ನಿಂದ ಮೃತಪಟ್ಟ ರೈತರ ಕೃಷಿ ಸಾಲ ಮನ್ನಾ ಚಿಂತನೆ: ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 12:28 IST
Last Updated 8 ಜುಲೈ 2021, 12:28 IST
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರ ಸಾಂದರ್ಭಿಕ ಚಿತ್ರ
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: ಈ ಸಾಲಿನಲ್ಲಿ ಕೋವಿಡ್‌ನಿಂದ ಮೃತ ಪಟ್ಟ ರೈತರ ಕೃಷಿ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಸಹಕಾರಿ ಸಾಲ ಪಡೆದಿರುವ ರೈತರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಎಷ್ಟು ಮೊತ್ತದವರೆಗಿನ ಸಾಲ ಮನ್ನಾ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಮೊದಲಿಗೆ ಎಷ್ಟು ಜನ ರೈತರು ಮೃತಪಟ್ಟಿದ್ದಾರೆ ಎಂಬುದನ್ನು ಒಂದು ವಾರದಲ್ಲಿ ಮಾಹಿತಿ ಪಡೆಯಲಾಗುವುದು. ಸಾಲ ಮನ್ನಾ ಮಾಡುವುದು ಶೇ 100 ರಷ್ಟು ಖಚಿತ ಎಂದು ಸಹಕಾರ ಸಚಿವ ಮತ್ತುಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಎಸ್‌.ಟಿ.ಸೋಮಶೇಖರ್‌ ಸುದ್ದಿಗಾರರಿಗೆ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು ₹721 ಕೋಟಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿಯೂ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.