ADVERTISEMENT

ಅಕ್ರಮ–ಸಕ್ರಮ ಜಾರಿಗೆ ಪ್ರಯತ್ನ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 21:00 IST
Last Updated 1 ಆಗಸ್ಟ್ 2022, 21:00 IST
   

ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ–ಸಕ್ರಮ ಯೋಜನೆಯನ್ನು ಜಾರಿಗೊಳಿಸುವಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ ಮಾಡಲಾಗುವುದು’ ಎಂದು ಅವರು ಹೇಳಿದರು.

ನ್ಯಾಯಾಲಯ ಒಪ್ಪಿಗೆ ನೀಡಿದರೆ ತ್ವರಿತವಾಗಿ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ 2,000 ಚದರ ಅಡಿಗಳವರೆಗಿನ ವಿಸ್ತೀರ್ಣದ ಮನೆಗಳನ್ನೂ ಸಕ್ರಮಗೊಳಿಸಲಾಗುವುದು. ಈ ಯೋಜನೆ ಜಾರಿಯಾದರೆ ಸರ್ಕಾರಕ್ಕೆ ₹ 20,000 ಕೋಟಿ ವರಮಾನ ಸಂಗ್ರಹವಾಗಲಿದೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.