ADVERTISEMENT

ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ, ನಂದಿನಿ ತಿನಿಸು ಕಡ್ಡಾಯ:CM ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2025, 3:26 IST
Last Updated 1 ನವೆಂಬರ್ 2025, 3:26 IST
   

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪರಿಸರ ಕಾಳಜಿ ಮತ್ತು ಸ್ಥಳೀಯ ಉತ್ಪನ್ನಗಳ ಪ್ರಚಾರಕ್ಕೆ ರಾಜ್ಯದ ಬದ್ಧತೆಯನ್ನು ಅವರು ಒತ್ತಿ ಹೇಳಿದ್ದಾರೆ.

ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ADVERTISEMENT

ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ 'ನಂದಿನಿ' ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದೂ ಸಿಎಂ ಆದೇಶದಲ್ಲಿ ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.