ಜೆಡಿಎಸ್
ಬೆಂಗಳೂರು: ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಕುಟುಂಬವನ್ನು ಮುಗಿಸಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಕುರಿತು ‘ಎಕ್ಸ್’ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಪಕ್ಷ, ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ವ್ಯವಸ್ಥಿತ ಹುನ್ನಾರ ನಡೆಸಿದೆ.
ವಕೀಲ ದೇವರಾಜೇಗೌಡ ಅವರ ಜತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾಗಿವೆ. ಇಂತಹ ಸಂಚಿಗಾಗಿ ₹100 ಕೋಟಿ ಬಂಡವಾಳ ಹೂಡಲು ಸಿದ್ಧರಿದ್ದರು ಎನ್ನುವ ವಿಷಯ ಆತಂಕಕಾರಿಯಾಗಿದೆ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.