ಬೆಂಗಳೂರು: ಪೊಲೀಸರು ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ಬಳಕೆ ಮಾಡುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಒಂದೊಮ್ಮೆ ಎಸ್‌ಡಿಪಿಐ ಕಚೇರಿಗಳು ಸೀಲ್ ಆಗಿದ್ದರೆ, ಅಂತಹ ಸ್ಥಳಗಳ ಬಗ್ಗೆ ನನಗೆ ಮಾಹಿತಿ ನೀಡಿ ಎಂದು ಕೇಳಿದ್ದಾರೆ.
ಪಿಎಫ್‌ಐ ಬಳಸುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಮಾತ್ರ ಶೋಧ ನಡೆಸಲಾಗಿದೆ ಎಂದು ಅವರು ಸ್ಪಷ್ಟನೆ ನಿಡಿದ್ದಾರೆ.
ಸೀಲಿಂಗ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಪಾಲನೆ ಮಾಡಲಾಗಿದೆ. ಆದರೂ ಎಲ್ಲಿಯಾದರೂ ಉಲ್ಲಂಘನೆಯಾಗಿದ್ದರೆ ನನ್ನ ಗಮನಕ್ಕೆ ತನ್ನಿ. ನ್ಯಾಯಪಾಲನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಲೋಕ್ ಕುಮಾರ್ ಈ ಸ್ಪಷ್ಟನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.