ADVERTISEMENT

‘ಪಿಎಂ ಆವಾಸ್‌ ಯೋಜನೆ: 25.4 ಲಕ್ಷ ಫಲಾನುಭವಿಗಳ ಸೇರ್ಪಡೆ -ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 16:01 IST
Last Updated 15 ಜನವರಿ 2022, 16:01 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆಯನ್ನು ಮಾನ್ಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ 25.40 ಲಕ್ಷ ಕುಟುಂಬಗಳನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಫಲಾನುಭವಿಗಳ ಅರ್ಹತಾ ಪಟ್ಟಿಗೆ ಸೇರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್‌ ಮಾಡಿ ಪ್ರಧಾನಿಗೆ ಧನ್ಯವಾದ ಹೇಳಿರುವ ಮುಖ್ಯಮಂತ್ರಿ, ‘ರಾಜ್ಯದ ಗ್ರಾಮೀಣ ಪ್ರದೇಶದ 18.78 ಲಕ್ಷ ವಸತಿರಹಿತ ಬಡ ಕುಟುಂಬಗಳು ಮತ್ತು 6.61 ಲಕ್ಷ ನಿವೇಶನರಹಿತ ಬಡ ಕುಟುಂಬಗಳನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ವ್ಯಾಪ್ತಿಗೆ ಸೇರಿಸುವ ಬಹುದಿನಗಳ ಬೇಡಿಕೆಗೆ ಪ್ರಧಾನಿಯವರು ಅನುಮೋದನೆ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ಇದು ನಿಜವಾಗಿಯೂ ಆ ಎಲ್ಲ ಕುಟುಂಬಗಳ ಜನರ ಜೀವನದಲ್ಲಿ ಸಂತೋಷವನ್ನು ತರುವುದರ ಜತೆಗೆ ಮಕರ ಸಂಕ್ರಾಂತಿಯನ್ನು ಇನ್ನಷ್ಟು ವಿಶೇಷವಾಗಿಸಿದೆ’ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕನ್ನಡಿಗರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.