
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಉತ್ತೇಜನ ಯೋಜನೆ ಅಡಿ, ರಾಜ್ಯದ 414 ಫಲಾನುಭವಿಗಳಿಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮವು (ಕೆಪೆಕ್) ₹16.28 ಕೋಟಿಯಷ್ಟು ಸಹಾಯಧನ ಬಿಡುಗಡೆ ಮಾಡಿದೆ.
ಈ ಯೋಜನೆಯ 50ನೇ ಬ್ಯಾಚಿನಲ್ಲಿ ರಾಜ್ಯದ 414 ಫಲಾನುಭವಿಗಳನ್ನು ಕೇಂದ್ರ ಸರ್ಕಾರವು ಆಯ್ಕೆ ಮಾಡಿದೆ. ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದ ಸಹಾಯಧನದ ಪಾಲನ್ನು ಬಿಡುಗಡೆ ಮಾಡಲಾಗಿದೆ ಎಂದು ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ತಿಳಿಸಿದ್ದಾರೆ.
2025–26ನೇ ಸಾಲಿನಲ್ಲಿ ಒಟ್ಟು 5,000 ಘಟಕಗಳ ಸ್ಥಾಪನೆಗೆ ರಾಜ್ಯ ಸರ್ಕಾರವು ₹206 ಕೋಟಿ ಅನುದಾನವನ್ನು ತೆಗೆದಿರಿಸಿದೆ. ಈ ಸಾಲಿನಲ್ಲಿ ಇನ್ನೂ 1,000 ಫಲಾನುಭವಿಗಳಿಗೆ ಸಹಾಯಧನ ಒದಗಿಸಲು ಕೇಂದ್ರ ಸರ್ಕಾರದಿಂದ ₹79 ಕೋಟಿ ಹೆಚ್ಚುವರಿ ಅನುದಾನ ಒದಗಿಸಿ ಎಂದು ಕೃಷಿ ಸಚಿವಾಲಯಕ್ಕೆ ಇದೇ 5ರಂದು ಮನವಿ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.