ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ 2020ರ ಏಪ್ರಿಲ್‌ನಿಂದ ಇಲ್ಲಿಯವರೆಗೆ ಕರ್ನಾಟಕದ ಫಲಾನುಭವಿಗಳಿಗೆ ಒಟ್ಟು ₹15,127.88 ಕೋಟಿ ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಲಹರ್ ಸಿಂಗ್ ಸಿರೋಯಾ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ ಠಾಕೂರ್, ʼಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 43,29,135 ಫಲಾನುಭವಿಗಳಿಗೆ 20ನೇ ಕಂತಿನ ₹877.32 ಕೋಟಿ ವಿತರಿಸಲಾಗಿದೆʼ ಎಂದರು.
ಯೋಜನೆ ಪ್ರಾರಂಭವಾದಾಗಿನಿಂದ ಕೇಂದ್ರವು ದೇಶದಾದ್ಯಂತ ರೈತರಿಗೆ 20 ಕಂತುಗಳಲ್ಲಿ ₹3.90 ಲಕ್ಷ ಕೋಟಿ ಹೆಚ್ಚು ಹಣ ವಿತರಿಸಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.