ADVERTISEMENT

ಪ್ರಧಾನಿ ಮೋದಿ–ಬೈಡನ್‌ ವರ್ಚುವಲ್‌ ಸಭೆ ಇಂದು

ಪಿಟಿಐ
Published 11 ಏಪ್ರಿಲ್ 2022, 2:03 IST
Last Updated 11 ಏಪ್ರಿಲ್ 2022, 2:03 IST
   

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಏ. 11) ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೊಡನೆ ವರ್ಚುವಲ್‌ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಭಾನುವಾರ ಹೇಳಿದೆ.

ಈ ವೇಳೆ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಹಕಾರಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ಹಾಗೂ ಇಂಡೋ-ಪೆಸಿಫಿಕ್ ಮತ್ತು ಪರಸ್ಪರ ಆಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಎಂಇಎ ತಿಳಿಸಿದೆ.

‘ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಸಹಭಾಗಿತ್ವವನ್ನು ಮುಂದುವರಿಸಲು ಎರಡೂ ರಾಷ್ಟ್ರಗಳಿಗೆ ಅನುವು ಮಾಡಿಕೊಡುತ್ತದೆ’ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.