ADVERTISEMENT

ಕಲಬುರ್ಗಿ: ಫಲಾನುಭವಿಗಳೊಂದಿಗೆ ಮೋದಿ ಸಂವಾದ 6ರಂದು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2019, 19:55 IST
Last Updated 3 ಮಾರ್ಚ್ 2019, 19:55 IST

ಕಲಬುರ್ಗಿ: ‘ಪ್ರಧಾನಿ ನರೇಂದ್ರ ಮೋದಿ ಅವರುಮಾರ್ಚ್‌ 6ರಂದು ಕಲಬುರ್ಗಿಗೆಭೇಟಿ ನೀಡಲಿದ್ದು, ‘ಆಯುಷ್ಮಾನ್‌ ಭಾರತ್‌’ ಆರೋಗ್ಯ ಯೋಜನೆಯ ಆಯ್ದ ಫಲಾನುಭವಿಗಳ ಜತೆ ಸಂವಾದ ನಡೆಸುವರು’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಯುಷ್ಮಾನ್‌ ಭಾರತ್‌ ಫಲಾನುಭವಿಗಳ ಜತೆ 15 ನಿಮಿಷ ಸಂವಾದ ನಡೆಸಲಿದ್ದು, ನಂತರ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವರು. ನಂತರ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ ಬಿಜೆಪಿಯ ಬೃಹತ್‌ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವರು’ ಎಂದು ಮಾಹಿತಿ ನೀಡಿದರು.

‘ಅಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 10.40ಗಂಟೆಗೆ ಬೀದರ್‌ ವಾಯುನೆಲೆಗೆಬರಲಿರುವ ಪ್ರಧಾನಿ, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ 11.40ಕ್ಕೆ ಕಲಬುರ್ಗಿಗೆ ಬರುವರು. ಸಮಾವೇಶದ ನಂತರ ತಮಿಳುನಾಡಿಗೆ ತೆರಳುವರು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.