
ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ಕೃಷ್ಣಮಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಬರುವಿಕೆಗಾಗಿ ಕಾದು ನಿಂತ ಜನರು.
ಉಡುಪಿ ಬಂದಿಳಿದ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸಿದರು. ಈ ವೇಳೆ ಅವರನ್ನು ನೋಡಲು ಸಾವಿರಾರು. ಜನರು ದಾರಿಯುದ್ದಕ್ಕೂ ನಿಂತಿದ್ದರು.
ನವದೆಹಲಿಯಿಂದ ವಾಯು ಪಡೆಯ ವಿಮಾನದ ಮೂಲಕ 10.25ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ.
ಮಂಗಳೂರುವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಾಗತಿಸಿದರು.
ಪ್ರಧಾನಿ ಮೋದಿ ರೋಡ್ ಶೋ ವೇಳೆ ನಗರದ ಕೆಲವೆಡೆ ನಿರ್ಮಿಸಿದ್ದ ವೇದಿಕೆಗಳಲ್ಲಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.
ಉಡುಪಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರೋಡ್‌ಶೋ ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.