ADVERTISEMENT

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಭರ್ಜರಿ ಸ್ವಾಗತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2022, 9:43 IST
Last Updated 20 ಜೂನ್ 2022, 9:43 IST
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳಕರ್ನಾಟಕ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ (ಸೋಮವಾರ) ಬೆಂಗಳೂರಿಗೆ ಬಂದಿಳಿದರು.

ಅವರು ಹೆಬ್ಬಾಳದ ಯಲಹಂಕದವಾಯನೆಲೆಯ ಎಚ್‌ಕ್ಯೂಟಿಸಿಗೆ ವಾಯುಸೇನೆಯ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದರು. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅಧಿಕಾರಿಗಳು ಸ್ವಾಗತಿಸಿದರು.

ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಬಿಜೆಪಿ ಕಾರ್ಯಕರ್ತರಿಗೆ ಕೈ ಬೀಸುತ್ತಾ ಪ್ರಧಾನಿಯವರು ಭಾರತೀಯ ವಿಜ್ಞಾನ ಸಂಸ್ಥೆಯ ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ADVERTISEMENT

ಐಐಎಸ್ಸಿ ಕಾರ್ಯಕ್ರಮದ ನಂತರ ಮೋದಿ ಅವರುಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದಾರೆ.

ಈ ಕಾರ್ಯಕ್ರಮದ ನಂತರ ಪ್ರಧಾನಿಯವರು ವಿಶೇಷ ಹೆಲಿಕಾಪ್ಟರ್‌ನಲ್ಲಿ ಸಂಜೆ ಮೈಸೂರಿಗೆ ತೆರಳಲಿದ್ದಾರೆ.

‘ಬೆಂಗಳೂರಿನ ಕಾರ್ಯಕ್ರಮದಲ್ಲಿ, ₹27,000 ಕೋಟಿಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ’ಎಂದು ಪ್ರಧಾನಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.